ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವನ್ಯಜೀವಿ ಧಾಮದ ಚಂದ್ರಂಪಳ್ಳಿ ಜಲಾಶಯದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಜನವರಿ 5 ರಂದು ಬೆಳಗ್ಗೆ 11 ಗಂಟೆಗೆ ದೋಣಿ ವಿಹಾರ ನಡೆಸಿದರು.. ಇನ್ನೂ ಸಾರ್ವಜನಿಕರು ಸಹ ಬೋಟಿಂಗ್ ಮಾಡಲು ಅನುವು ಮಾಡಿಕೊಡಬೇಕು.. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಈ ವೇಳೆ ಪ್ರಾದೇಶಿಕ ಅರಣ್ಯ ಇಲಾಖೆಯ ಜಿಲ್ಲಾ ಅರಣ್ಯಾಧಿಕಾರಿ ಸುಮೀತಕುಮಾರ ಪಾಟೀಲ, ಸಹಾಯಕ ಅರಣ್ಯ ಸಂರ-ಕ್ಷಣಾಧಿಕಾರಿ ಬಸವರಾಜ ಡಾಂಗೆ ಉಪಸ್ಥಿತರಿದ್ದರು