ಗೌರಿಬಿದನೂರು: ಅಂಬೇಡ್ಕರ್ ಪುತ್ಥಳಿ ವಿವಾದ, ಹಂಪಸಂದ್ರ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ
ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ ನಡೆದಿದ್ದು ಮಹರ್ಷಿ ವಾಲ್ಮೀಕಿ ಸಮುದಾಯದ ಹಾಗೂ ಅಂಬೇಡ್ಕರ್ ಪುತ್ಥಳಿ ವಿಚಾರಕ್ಕೆ ಗಲಾಟೆ ನಡೆದಿದೆ. ಇಂದು ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಹಮ್ಮಿಕೊಂಡಿದ್ದು ರಾತ್ರಿ ವೇಳೆ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಲು ಮುಂದಾಗಿದ್ದು ಇದೇ ಜಾಗದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯದ ಮುಖಂಡರು ಎಂಟ್ರಿ ಕೊಟ್ಟಿದ್ದು ಸಾಕಷ್ಟು ವಾಗ್ವಾದ ಶುರುವಾಗಿದೆ.