ಹಾರೋಹಳ್ಳಿ: ಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರ ಕಾರ್ಯಕರ್ತರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿ
ಹಾರೋಹಳ್ಳಿ ಪಟ್ಟಣದಲ್ಲಿ ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಯ ಜೆಡಿಎಸ್ ಕಾರ್ಯಕರ್ತರ ಸಭೆಯನ್ನ ಆಯೋಜಿಸಲಾಗಿತ್ತು. ಪಕ್ಷ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆ ಸಿದ್ಧತೆಗಳ ಬಗ್ಗೆ ಮುಖಂಡರು ಹಾಗೂ ಕಾರ್ಯಕರ್ತರುಗಳ ಜತೆ ಸಭೆ ನಡೆಸಲಾಯಿತು. ಇದಕ್ಕು ಮುನ್ನ ಹಾರೋಹಳ್ಳಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡು ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ಮಂಜುನಾಥ್, ರಾಮನಗರ ತಾಲ್ಲೂಕು ಅಧ್ಯಕ್ಷರಾದ ಶ್ರೀ ಸಬ್ಬಕೆರೆ ಶಿವಲಿಂಗಪ್ಪ, ಕನಕಪುರ ತಾಲ್ಲೂಕು ಅಧ್ಯಕ್ಷರಾದ ಶ್ರೀ ನಾಗರಾಜು ಉಪಸ್ಥಿತರಿದ್ದರು.