ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಬೆಂಗಳೂರು,ಜನ ಸೇವಾ ಪ್ರತಿಷ್ಠಾನ ರಾಯಚೂರು, ಶ್ರುತಿ ಸಾಹಿತ್ಯ ಮೇಳ ರಾಯಚೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಇದೇ ಡಿಸೆಂಬರ್ 20 ಶನಿವಾರದಂದು ಸಂಜೆ 4:30 ರಿಂದ ರಾಯಚೂರು ನಗರದ ಸಾವಿತ್ರಿ ಕಾಲೋನಿಯಲ್ಲಿರುವ ಶ್ರೀ ಜೋಡು ವೀರಾಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಸ್ಮರಣೋತ್ಸವದ ಅಂಗವಾಗಿ ಬನ್ನಂಜೆ 90 ವಿಶ್ವ ನಮನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಸರ್ಕಾರದ ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಮಾಜಿ ಅಧ್ಯಕ್ಷ ತ್ರಿವಿಕ್ರಮ ಜೋಶಿ ಸೋಮವಾರ 10 ಗಂಟೆ 30 ನಿಮಿಷಕ್ಕೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.