ಶಿವಮೊಗ್ಗ: ನಗರದ ಮಂಜುನಾಥ ಬಡಾವಣೆಯ ಫಲಾನುಭವಿಗಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಹಕ್ಕುಪತ್ರ ವಿತರಿಸಿದ ಶಾಸಕ ಚನ್ನಬಸಪ್ಪ
ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ 16 ಫಲಾನುಭವಿಗಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಕ್ಕುಪತ್ರ ವಿತರಿಸಿದ ಶಿವಮೊಗ್ಗದ ಶಾಸಕ ಎಸ್.ಎನ್.ಚನಬಸಪ್ಪ. ಶನಿವಾರ ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಯೋಗ ಮಂದಿರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಾಕಿ ಇರುವಂತಹ 16 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಚನ್ನಬಸಪ್ಪ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸಿತರಿದ್ದರು.