ಶಿವಮೊಗ್ಗ: ಅರಳಸುರುಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ತಾಲ್ಲೂಕಾಡಳಿತ ಕ್ರಮ, ಸಹೋದರರಿಬ್ಬರಿಂದ ಆತ್ಮಹತ್ಯೆಗೆ ಯತ್ನ
ರಾಜಕಾಲುವೆಯ ನೀರು ತಮ್ಮ ಜಮೀನು ಮೂಲಕ ಹೋಗುತ್ತದೆ ಈ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಶ್ವಾಸ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಹುಲಿಸರ ಸರ್ವೆ ನಂಬರ್ 125 ಹಾಗೂ 126ರ ಜಾಗದ ಮಾಲೀಕರು ದಿನೇಶ್ ಹಾಗೂ ಸತೀಶ್ ಎಂಬೋರು ಕಲೆನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ.ಇಬ್ಬರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.