ಜಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಪಕ್ಷಕ್ಕೆ ಸೇರ್ಪಡೆ
ಜಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಶುಕ್ರವಾರ ನೂರಾರು ಕಾರ್ಯಕರ್ತರೊಂದಿಗೆ ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯಂದ್ರ ಬಿಜೆಪಿ ಶಾಲು ಹಾಕುವ ಮೂಲಕ ಸ್ವಾಗತ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವರಾದ ಸಿ.ಟಿ.ರವಿ, ಸುನಿಲ್ ಕುಮಾರ್, ಹರಿಹರ ಶಾಸಕ ಬಿ.ಪಿ.ಹರೀಶ್, ಎಂಎಲ್‌ಸಿ ರವಿಕುಮಾರ್, ಜಗಳೂರು ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಇದ್ದರು.