ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಕೇಬಲ್ ಟೆಲಿವಿಷನ್ ಮೇಲ್ವಿಚಾರಣಾ ಸಮಿತಿ ಸಭೆ
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದ ಮಂಗಳವಾರ ಮಧ್ಯಾಹ್ನ 12:30 ಗಂಟೆಯಲ್ಲಿ ಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ pn ರವೀಂದ್ರ ಅವರು ಕೇಬಲ್ ಟೆಲಿವಿಷನ್ ಮರು ಪ್ರಸಾರ ಮಾಡುವರನ್ನು ಕೇಬಲ್ ಆಪರೇಟಗಳೆಂದು ಕರೆಯಲಾಗುತ್ತದೆ. ಅಧಿಕೃತ ಕೇಬಲ್ ಆಪರೇಟಲ್ಗಳು ಜಿಲ್ಲಾ ಮಟ್ಟದ ಪ್ರಧಾನ ಅಂಚೆ ಕಚೇರಿಯಲ್ಲಿ ನೊಂದಣಿ ಮಾಡಿಸಿ ಕೇಬಲ್ ಆಪರೇಟರ್ ಲೈಸೆನ್ಸ್ ಪಡೆಯುವುದು ಕಡ್ಡಾಯವನೆಟ್‌ವರ್ಕ್ ಕಾಯಿದೆಯಡಿ ವಾಹಿನಿಗಳು ಕಾರ್ಯಕ್ರಮ ಮತ್ತು ಜಾಹಿರಾತು ಸಂಹಿತೆಯನ್ನು ಪಾಲನೆ ಮಾಡಬೇಕು ಎಂ ಬಿತ್ಯಾದಿ ಸಲಹೆಗಳನ್ನು ನೀಡಿದರು