ಚಿತ್ರದುರ್ಗದ ಎಪಿಎಂಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿಂದು ವಿಶ್ವ ಮಣ್ಣು ದಿನಾಚರಣೆ ಹಾಗೂ ಕಿಸಾನ್ ಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗ ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕದ ಸಹಯೋಗದಲ್ಲಿ ವಿಶ್ವ ಮಣ್ಣು ದಿನಾಚರಣೆ ಹಾಗೂ ಕಿಸಾನ್ ಗೋಷ್ಠಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಚಿತ್ರದುರ್ಗ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿದ್ದಾರೆ.