ಬಂಗಾರಪೇಟೆ: ಪ್ರಸನ್ನ ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದ ರಾಜಗೋಪುರ ಕಾಮಗಾರಿ ಪರಿಶೀಲಿಸಿದ ಶಾಸಕಿ ರೂಪಕಲಾ
ಕೆ.ಜಿ.ಎಫ್. ನಗರದ ಪ್ರಸನ್ನ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ನಿರ್ಮಾಣ ಕಾಮಗಾರಿಯನ್ನು ಶಾಸಕಿ ರೂಪಕಲಾ ಶಶಿಧರ್ ಪರಿಶೀಲಿಸಿದ್ದಾರೆ. ರಾಜಗೋಪುರ ನಿರ್ಮಾಣ ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾದಿಗಳ ಭೇಡಿಕೆಯಾಗಿದ್ದು ಯಾವುದೇ ವಿಳಂಬಕ್ಕೆ ಅವಕಾಶ ನೀಡದೇ ನಿರ್ಮಾಣ ಕಾಮಗಾರಿ ನಿರಂತರವಾಗಿ ಸಾಗಬೇಕು ಹಾಗೂ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ನಿರ್ಮಾಣ ಜವಾಬ್ದಾರಿ ಹೊತ್ತ ಶಿಲ್ಪಿಗಳಿಗೆ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ತಿಳಿಸಿದೆ