ಬಳ್ಳಾರಿ: ರಕ್ತದಾನವೇ ಶ್ರೇಷ್ಠ ದಾನ: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ
ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯಿತು. 18ರಿಂದ 60 ವರ್ಷದೊಳಗಿನ ಆರೋಗ್ಯವಂತರು ರಕ್ತದಾನ ಮಾಡುವಂತೆ ಅಧಿಕಾರಿಗಳು ಕರೆ ನೀಡಿದರು. ರಕ್ತ ಸಂಗ್ರಹಣೆಯಲ್ಲಿ ಸಹಕರಿಸಿದ ವಿವಿಧ ಸಂಘಟನೆಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.