ಜಿಲ್ಲಾಡಳಿತದಿಂದ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರಕ್ಕೆ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ 11 ಗಂಟೆಗೆ ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯ ಆಗಬೇಕು ಎಂಬುದಾಗಿ ಯೋಚಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಈ