ಚಿಕ್ಕಬಳ್ಳಾಪುರ: ಮಾನಸಿಕ ಒತ್ತಡ ನಿವಾರಣೆಗೆ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರವೇ ಸೂತ್ರ ಸಾಯಿ
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದ ಒತ್ತಡದಿಂದ ಜನರಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ‘ಒಂದು ಜಗತ್ತು ಒಂದು ಕುಟುಂಬ’ ಮಹೋತ್ಸವದ 71ನೇ ದಿನ ಅವರು ಮಾತನಾಡಿ, ಬದಲಾದ ಜೀವನ ಪದ್ಧತಿ ಮತ್ತು ಮೌಲ್ಯಗಳ ಕುಸಿತ ಆತಂಕಕಾರಿ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯದ ಕೊರತೆ ಇದ್ದು, ಈ ಸಮಸ್ಯೆಗಳಿಗೆ ಪರಿಹಾರವಾಗಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಎಂಬ ಮೂರು ಸೇವೆಗಳನ್ನು ಆರಿಸಿಕೊಂಡಿದ್ದೇವೆ ಎಂದು ತಿಳಿಸಿದರು.