ಮುಂಡಗೋಡ : ಮುಂಡಗೋಡ ಪಟ್ಟಣದ ಮಾದರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗಿದೆ. ಅಹಿತಕರ ಘಟನೆಯ ಸುದ್ದಿ ತಿಳಿದಂತೆಯೇ ಶಾಸಕ ಶಿವರಾಮ ಹೆಬ್ಬಾರ್ ಅವರು ತಕ್ಷಣವೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು. ಘಟನೆಯ ಮೂಲ ಕಾರಣವನ್ನು ಪತ್ತೆಹಚ್ಚಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.