ಶಿವಮೊಗ್ಗ: ಶಿವಮೊಗ್ಗ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.79 ದಿನಗಳ ಬಳಿಕ ಚಿನ್ನಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದ್ದು,1 ಲಕ್ಷ ರೂ. ಷೂರಿಟಿ, 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಸದ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿದ್ದಾನೆ.ನ್ಯಾಯಾಲಯದಿಂದ ಆದೇಶ ಬಂದ ಬಳಿಕ ಬಿಡುಗಡೆಗೊಳಿಸಲಾಗುತ್ತದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿರುತ್ತಾರೆ. ಈ ಕುರಿತಾದ ಮಾಹಿತಿ ಸೋಮವಾರ ಸಂಜೆ ಲಭ್ಯವಾಗಿದೆ.