ಬೆಂಗಳೂರು ಉತ್ತರ: ಪ್ರಸಕ್ತ ಹಬ್ಬದ ಅವಧಿಯಲ್ಲಿ ಗುರಿ ಮೀರಿ 1,100 ಮೆ.ಟ ನಂದಿನಿ ಸಿಹಿ ಉತ್ಪನ್ನ ಮಾರಾಟ: ನಗರದಲ್ಲಿ ಸಚಿವ ಕೆ.ವೆಂಕಟೇಶ್
ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ವಿಕಾಸಸೌದದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿದ ಅವರು, 2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 33.48 ಕೋಟಿ ರೂ. ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1,000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗಿದಪಡಿಸಲಾಗಿತ್ತು ಎಂದು ವಿವರಿಸಿದರು.