ಮೈಸೂರು: ದಸರಾ ಆನೆ ಜೊತೆ ರೀಲ್ಸ್ ಮಾಡಿದ ಯುವತಿಗೆ ದಂಡ ಹಾಕಲು ಮುಂದಾದ ಅಧಿಕಾರಿಗಳು
Mysuru, Mysuru | Sep 20, 2025 ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಶಿಬಿರಕ್ಕೆ ಸಾರ್ವಜನಿಕರಿಗೆ ನಿರ್ಬಂಧವಿದ್ದು ಆದರೂ ಸಹ ಆನೆಗಳ ಜೊತೆ ಯುವತಿ ರೀಲ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೆ ಎಚ್ಚೆತ್ತ ಅರಣ್ಯ ಇಲಾಖೆ ಯುವತಿಗೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, 2025ರ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳು ಮೈಸೂರು ಅರಮನೆ ಆವರಣದಲ್ಲಿ ವಾಸ್ತವ್ಯ ಮಾಡಿದ್ದು ಸದರಿ ಆನೆಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರು ಮತ್ತು ಮಾದ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರು ದಸರಾ ಆನೆಗಳ ಶಿಬಿರಕ್ಕೆ ತೆರಳಲು ಅವಕಾಶವಿರುವುದಿಲ್ಲ. ಅಪರಿಚಿತ ಮಹಿಳೆಯೊಬ್ಬರು