ರಾಯಚೂರು: ನಗರದ ಹಲವೆಡೆ ಮಹಾನಗರ ಪಾಲಿಕೆ ಆಯುಕ್ತರಿಂದ ಸರ್ಪ್ರೈಸ್ ವಿಸಿಟ್; ಅಧಿಕಾರಿ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ
ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೆ.29ರ ಸೋಮವಾರ ಮಧ್ಯಾಹ್ನ ಮೂರು ಗಂಟೆಗೆ ವಿವಿಧೆಡೆ ಅನಿರೀಕ್ಷಿತ ಭೇಟಿ ಕೈಗೊಂಡು 15ನೇ ಹಣಕಾಸು ಆಯೋಗದ ಅಡಿಯಲ್ಲಿನ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. 6-7 ವರ್ಷಗಳಿಂದ ಬಾಕಿ ಉಳಿದ ಕಾರ್ಯಗಳ ಬಗ್ಗೆ ಪರಿಶೀಲಿಸಿದ ಆಯುಕ್ತರು, ಬಾಕಿ ಇರಿಸಿಕೊಂಡ ಎಲ್ಲ ರಸ್ತೆಗಳು ಮತ್ತು ಚರಂಡಿ ಕಾರ್ಯಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಠೇಕುದಾರರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರಸ್ತೆಗಳು ಮತ್ತು ಚರಂಡಿಗಳು ನಿಗದಿಪಡಿಸಿದಂತೆ ವೈಜ್ಞಾನಿಕ ರೀತಿಯಲ್ಲಿಯೇ ಅಗಲ, ಉದ್ದ ಇರುವಂತೆ ಮತ್ತು ಕಾಮಗಾರಿಯು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು