ದಾಂಡೇಲಿ: ಅ.24ರಂದು ತಾಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ, ತಹಶೀಲ್ದಾರ್ ಪ್ರಕಟಣೆ
ದಾಂಡೇಲಿ : ನ.01ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಕುರಿತಂತೆ ಅ.24ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ತಿಳಿಸಿದ್ದಾರೆ. ಅವರು ಬುಧವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ಈ ಸಭೆಯಲ್ಲಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳು ಭಾಗವಹಿಸುವಂತೆ ಕೋರಿದ್ದಾರೆ.