ಯಲ್ಲಾಪುರ : ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ವಾಸವಿ ಯುವತಿ ಮಂಡಳ ಜೋಯಿಡಾ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ನುಡಿ ಸಂವಿಧಾನ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು. ಹಿರಿಯ ಸಾಹಿತಿ ವನರಾಗ ಶರ್ಮ ಅಧ್ಯಕ್ಷತೆ ವಹಿಸಿದ್ದರು. ವಿಚಾರ ಸಂಕಿರಣದಲ್ಲಿ ವಿಶ್ವದರ್ಶನ ಪಿಯು ಕಾಲೇಜು ಪ್ರಾಂಶುಪಾಲ ಡಾ. ಡಿ.ಕೆ. ಗಾಂವಕರ ರ ಜಿಲ್ಲೆ ಯ ಭಾಷಾ ಸಾಮರಸ್ಯ ಮತ್ತು ಸವಾಲುಗಳು ಎಂಬ ವಿಷಯದ ಕುರಿತು, ವಿಶ್ವದರ್ಶನ ಪ್ರೌಢಶಾಲಾ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ,ಸೀತಾ ದಾನಗೇರಿ,ಮಧು ಕೇಶವ್ ಭಾಗ್ವತ್,ಗಣಪತಿ ಕಂಚಿಪಾಲ್ ಇದ್ದರು.