ಬೆಂಗಳೂರು ಉತ್ತರ: ರಾಜ್ಯದಲ್ಲಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಆಯಾ ಇಲಾಖೆಗಳ ಅನುಮತಿ ಕಡ್ಡಾಯ: ಸರ್ಕಾರದಿಂದ ಆದೇಶ
ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು. ಅದರಂತೆ ಸರ್ಕಾರಿ ಸಾಮ್ಯದ ಶಾಲಾ -ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ – ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದಿದೆ.