ಮಸ್ಕಿ: ಗುಡಿಹಾಳ ಗ್ರಾಮದಲ್ಲಿ ನರೇಗಾ ಕೂಲಿಕಾರರಿಗೆ ಪ್ರತಿಜ್ಞಾವಿಧಿ ಬೋಧನೆ
Maski, Raichur | Mar 26, 2024 ಸಂವಿಧಾನದತ್ತವಾಗಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು ಎಂದು ಮಸ್ಕಿ ತಾ.ಪಂ ಇಒ ಅಂಬರೀಶ್ ಸಲಹೆ ನೀಡಿದರು. ಮಸ್ಕಿ ತಾಲ್ಲೂಕಿನ ಗುಡಿಹಾಳ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ನರೇಗಾ ಕೂಲಿಕಾರರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.