ಮುಂಡಗೋಡ: ಲೋಯೋಲಾ ತರಭೇತಿ ಕೇಂದ್ರದಲ್ಲಿ ನಡೆದ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ
ಮುಂಡಗೋಡ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡಾಕ್, ಕಾರವಾರ, ಲೊಯೋಲಾ ವಿಕಾಸ ಕೇಂದ್ರ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಹಾಗೂ ಸಿಸಿಎಫ್ ಲೊಯೋಲಾ ಜನಸ್ಫೂರ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ, ಬುಡಕಟ್ಟು ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ಪುರುಷರು/ಮಹಿಳೆರಿಗಾಗಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಉದ್ಘಾಟನೆಯು ಮುಂಡಗೋಡದ ಲೊಯೋಲಾ ತರಬೇತಿ ಕೇಂದ್ರದಲ್ಲಿ ಸೋಮವಾರ ನಡೆಯಿತು.