ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ಬಹಳ ನೋವು ತಂದಿದೆ ಅವರ ಅಗಲಿಕೆ ಇಡಿ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಹಳ ದೊಡ್ಡ ವ್ಯಕ್ತಿಯಾಗಿದ್ದ ಅವರು ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ನೋವುಬರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನಾನು ಈಗ ದಾವಣಗೆರೆಗೆ ಅವರ ಅಂತಿಮ ದರ್ಶನ ಪಡೆಯಲು ತೆರಳುತಿದ್ದೇನೆ ಎಂದರು.