ಚಾಮರಾಜನಗರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ನಗರದಲ್ಲಿ ಸೈಕಲ್ ರ್ಯಾಲಿ
ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಎ.ಆರ್.ಕೃಷ್ಣಮೂರ್ತಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಮುಂಭಾಗದಿಂದ ಹೊರಟ ಸೈಕಲ್ ರ್ಯಾಲಿ, ಬಿ.ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರ ವೃತ್ತ, ಭುವನೇಶ್ವರಿ ವೃತ್ತ ಸುಲ್ತಾನ್ ಷರೀಫ್ ಸರ್ಕಲ್ ನಲ್ಲಿ ಯೂಟರ್ನ್ ಡಿವಿಯೇಷನ್ ರಸ್ತೆ ಭುವನೇಶ್ವರಿ ವೃತ್ತ, ಜಿಲ್ಲಾಡಳಿತ ಭವನದಲ್ಲಿ ಕೊನೆಗೊಂಡಿತು.