ಕುಷ್ಟಗಿ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗ್ಯಾರೇಜ್, 15 ಬೈಕ್ ಗಳು ಸುಟ್ಟು ಭಸ್ಮ...!
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಒಂದಕ್ಕೆ ಬೆಂಕಿ ತಗುಲಿ, ಗ್ಯಾರೇಜ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ಮುದೇನೂರು ಗ್ರಾಮದ ಸಲೀಂ ಎಂಬುವರಿಗೆ ಸೇರಿದ ಗ್ಯಾರೇಜ್ ನಲ್ಲಿದ್ದ 15 ಬೈಕಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.