ಬೆಂಗಳೂರು ಉತ್ತರ: ನಟ ದರ್ಶನ್ ಬಳ್ಳಾರಿ ಜೈಲಿಗಾ ಅಥವಾ ಪರಪ್ಪನ ಅಗ್ರಹಾರಕ್ಕಾ? ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ ನಡೆಸಲಾಗಿದೆ. ಜತೆಗೆ ಆಗಸ್ಟ್ 23ಕ್ಕೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್‌ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು ಅಲ್ಲಿಗೆ ಶಿಫ್ಟ್ ಮಾಡಬೇಕು ಅಂತಾ ಅರ್ಜಿ ಸಲ್ಲಿಸಿದ್ದರು.