ಬೆಂಗಳೂರು ಉತ್ತರ: ನಗರದಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ : ಮಹೇಶ್ವರ್ ರಾವ್
ಜಿಬಿಎ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೆಪ್ಟೆಂಬರ್ 15ರಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿ ಅಧಿಕಾರಿಗಳು ಹಾಗು ಗುತ್ತಿಗೆದಾರರ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಮಗಾರಿ ಪ್ರಾರಂಭವಾಗಿರುವ ರಸ್ತೆಗಳನ್ನ ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಈ ವೇಳೆ ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೊಳನ್, ರಮೇಶ್ ಡಿ.ಎಸ್, ಪೊಮ್ಮಲ ಸುನಿಲ್ ಕುಮಾರ್, ರಮೇಶ್ ಕೆ.ಎನ್, ಡಾ. ರಾಜೇಂದ್ರ ಕೆ.ವಿ ಮತ್ತಿತರರು ಉಪಸ್ಥಿತರಿದ್ದರು.