ಶೋರಾಪುರ: ತಾಲೂಕಿನಲ್ಲಿ ಮಳೆಯಿಂದ ಬೆಳೆ ಹಾನಿಯಾದ ರೈತರ ಜಮೀನುಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಪರಿಶೀಲನೆ
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಶಾಸಕ ರಾಜ ವೇಣುಗೋಪಾಲ್ ನಾಯಕ್ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಹತ್ತಿ ಬೆಳೆ, ತೊಗರಿ ಬೇಳೆ, ಪರಿಶೀಲನೆ ನಡೆಸಿದರು. ಕೃಷಿ ಬೆಳೆಗಳ ಸಮೀಕ್ಷೆ ನಡೆಸಿ ಕೂಡಲೆ ವರದಿ ಸಲ್ಲಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ್ ನಾಯಕ ಅವರು ತಿಳಿಸಿದರು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧವಿದ್ದು ಯಾದಗಿರಿ ಜಿಲ್ಲೆಯ ಜನರ ಹಿತ ಕಾಪಾಡುವುದಕ್ಕೆ ಸರ್ಕಾರ ಬಂದವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ತಿಳಿಸಿದರು