ಮೊಳಕಾಲ್ಮುರು: ರಂಗಯ್ಯನದುರ್ಗ ಜಲಾಶಯದಲ್ಲಿ ಸಾಹಸ ಪ್ರವಾಸೋದ್ಯಮಹಾಗೂ ಜಲ ಕ್ರೀಡೆಗಳನ್ನು ಕೈಗೊಳ್ಳಲು ಕಳೆದ ವರ್ಷವೇ ಅನುಮತಿ ಸಿಕ್ಕಿದೆ:ಜಿಲ್ಲಾಧಿಕಾರಿ ವೆಂಕಟೇಶ್
ಚಿತ್ರದುರ್ಗ:-ಜಿಲ್ಲೆಯ ಚಂದ್ರವಳ್ಳಿ ಕೆರೆ, ಮಲ್ಲಾಪುರ ಕೆರೆ, ಚಳ್ಳಕೆರೆ ತಾಲ್ಲೂಕಿನ ಕೆರೆಕಲ್ ಕೆರೆ, ಮೊಳಕಾಲ್ಕೂರು ತಾಲ್ಲೂಕು ರಂಗಯ್ಯನದುರ್ಗ ದಲ್ಲಿ ಸಾಹಸ ಪ್ರವಾಸೋದ್ಯಮ ಹಾಗೂ ಜಲಕ್ರೀಡೆಗಳನ್ನು ಕೈಗೊಳ್ಳಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು ಕಳೆದ ವರ್ಷವೇ ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಂದ್ರವಳ್ಳಿ ಕೆರೆಯಲ್ಲಿ ಜಲಸಾಹಸ ಕ್ರೀಡೆಗಳಾದ ಕಯಾಕಿಂಗ್, ಕನೋಯಿಂಗ್, ವಿಂಡ್ ಸರ್ಫಿಂಗ್, ಜಿಟ್ ಸ್ಕಿಯಿಂಗ್ ವಾಟರ್ ಜಾರ್ಬಿಂಗ್ ಕೈಗೊಳ್ಳಲಾಗುತ್ತಿದೆ.