ಧಾರವಾಡ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 14 ಹಾಗೂ 15 ರಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ. ನವೆಂಬರ್ 14ರಂದು ಬೆಳಿಗ್ಗೆ 8.30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ನವೆಂಬರ್ 15 ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಅವರು ಬಹುಮಾನ ವಿತರಿಸಲಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ