ಹಾಸನ: ಶಿಲುಬೆಟ್ಟದಲ್ಲಿನ ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ರೈತ ಮುಖಂಡರು ಹಾಗೂ ಹೊಸಮಠ ಗ್ರಾಮಸ್ಥರು ಡಿಸಿ ಕಚೇರಿ ಎದುರು ಪ್ರತಿಭಟನೆ
Hassan, Hassan | Sep 22, 2025 ಹಾಸನ ಜಿಲ್ಲೆಯ ಆಲೂರು ತಾಲ್ಲೂಕು, ಹೊಸಮಠ ಗ್ರಾಮದ ಸರ್ವೆ ನಂಬರ್ ೧೫೧ ರ ಹೊಸಮಠ ಗ್ರಾಮದಲ್ಲಿ ಕ್ರೈಸ್ತರ ಪವಿತ್ರ ತೀರ್ಥಸ್ಥಳವಾದ ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿರುವುದರಿಂದ ಗ್ರಾಮಸ್ಥರು, ಕ್ರೈಸ್ತ ಧರ್ಮಗುರುಗಳು ಹಾಗೂ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಗೋವು, ಕುರಿ ಜೊತೆ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಒಂದು ಮನವಿ ಸಲ್ಲಿಸಿದರು