ಮಂಗಳೂರು: ಸೆಪ್ಟೆಂಬರ್ 22ರಿಂದ ಮಂಗಳೂರು ದಸರಾ ವೈಭವ; ಕುದ್ರೋಳಿಯಲ್ಲಿ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾಹಿತಿ
ರಾಜ್ಯದಲ್ಲಿ ದಸರಾ ಸಂಭ್ರಮ. ಮೈಸೂರು ಬಿಟ್ರೆ ಮಂಗಳೂರು ದಸರಾ ರಾಜ್ಯದಲ್ಲಿ ಫೇಮಸ್. ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಇದಕ್ಕೆ ಬೇಕಾದ ಸಿದ್ದತೆ ನಡೆದಿದೆ ಎಂದು ಕುದ್ರೋಳಿ ದೇಗುಲದ ಆಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ. ಅವರು ಶನಿವಾರ ಮಧ್ಯಾಹ್ನ ದೇಗುಲದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.