ಕಡೂರು: ಪಿಳ್ಳೆನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಶಿಧರ್ ಅವಿರೋಧ ಆಯ್ಕೆ
ತಾಲ್ಲೂಕಿನ ಪಿಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬಿ.ಹೆಚ್.ಶಶಿಧರ್ ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯಡಿ ಬಿ.ಹೆಚ್.ಶಶಿಧರ್ ಹೊರತುಪಡಿಸಿ ಬೇರ್ಯಾವ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಸ್.ಬಿ.ಉಮೇಶ್ ಅವಿರೋಧ ಆಯ್ಕೆ ಘೋಷಿಸಿದರು. ಬಳಿಕ ಮಾತನಾಡಿದ ನೂತನ ಗ್ರಾ.ಪಂ. ಅಧ್ಯಕ್ಷ ಬಿ.ಹೆಚ್.ಶಶಿಧರ್ ಏಳೂರು ಗ್ರಾಮಗಳನ್ನು ಒಳಗೊಂಡಿರುವ ಪಂಚಾಯಿತಿ ಅತಿಹೆಚ್ಚು ಬಯಲುಸೀಮೆ ಪ್ರದೇಶವಾಗಿದ್ದು, ಕುಡಿಯುವ ನೀರು ಮತ್ತು ಮಳೆ ನೀರು ಸಂಗ್ರಹಕ್ಕೆ ಒತ್ತು ನೀಡಲಾಗುವುದು ಎಂದರು.