ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಮಧ್ಯಾಹ್ನ 12 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ತುರ್ತು ಚಿಕಿತ್ಸೆಗಾಗಿ ರೋಗಿಗಳು ಜಿಲ್ಲಾಸ್ಪತ್ರೆಗೆ ಆಗಮಿಸಿದಾಗ ಅವರನ್ನು ಬೇರೆಡೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ತುರ್ತು ಸಂದರ್ಭದಲ್ಲಿ ಅಗತ್ಯ ತಜ್ಞ ವೈದರು ಜಿಲ್ಲಾಸ್ಪತ್ರೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದಿದ್ದರೆ, ಕೂಡಲೇ ಜಿಲ್ಲಾ ಕೇಂದ್ರದಲ್ಲಿರುವ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರ ಎರವಲು ಸೇವೆ ಪಡೆದು, ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸವಾಗಬೇಕು ಎಂದು ಹೇಳಿದರು