ಇಳಕಲ್: ಇಳಕಲ್ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯ ಬ್ಯಾಂಕಗಳಿಗೆ ಭೇಟಿ ನೀಡಿದ ಪಿಎಸ್ಐ ಮಲ್ಲಿಕಾರ್ಜುನ ಸತ್ತಿಗೌಡರ
Ilkal, Bagalkot | Sep 26, 2025 ಬಾಗಲಕೋಟ ಜಿಲ್ಲೆಯ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯ ಬ್ಯಾಂಕ್ಗಳಿಗೆ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ಸತ್ತಿಗೌಡರ ಸೆ.೨೬ ಮಂಗಳವಾರ ಮಧ್ಯಾಹ್ನ ೨ ಗಂಟೆಗೆ ಭೇಟಿ ನೀಡಿದರು. ಭೇಟಿ ನೀಡಿ ಮಾತನಾಡಿದ ಅವರು ಮುಂಜಾಗೃತಾ ಕ್ರಮವಾಗಿ ಬ್ಯಾಂಕ್ ಆವರಣದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪರಿಶೀಲಿಸುವಂತೆ, ಬ್ಯಾಂಕ್ ಬಾಗಿಲು ಹಾಗೂ ಲಾಕರ್ಗಳಿಗೆ ಅಲಾರಂ ಸಿಸ್ಟಂ ಅಳವಡಿಸುವಂತೆ, ಹೆಚ್ಚಿನ ಮೊತ್ತದ ನಗದು ಸಾಗಣೆ ವೇಳೆ ಕಡ್ಡಾಯವಾಗಿ ಭದ್ರತಾ ಸಿಬ್ಬಂದಿ ಇರುವಂತೆ, ಸಂಶಯಾಸ್ಪದ ವ್ಯಕ್ತಿಗಳ ಚಟುವಟಿಕೆ ಕಂಡುಬAದರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು.