ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಆಚರಿಸಿದರು. ನಂತರ ಶಾಸಕ ಯು.ಬಿ.ಬಣಕಾರ ಅವರು ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ಮುಸ್ಲಿಂ ಬಾಂಧವರ ಮನೆಗಳಿಗೆ ತೆರಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಸೋಮವಾರ ಬೆಳಿಗ್ಗೆ ಒಂಬತ್ತೂವರೆ ಗಂಟೆಯಿಂದ ಹನ್ನೆರಡೂವರೆ ಗಂಟೆಯವರೆಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು