ಯಾದಗಿರಿ: ಗೋನಾಲ ಗ್ರಾಮದಲ್ಲಿ ಬಾವಿ ಮುಚ್ಚಿದವರ ವಿರುದ್ಧ ಕ್ರಮಕ್ಕೆ ನಗರದ ಡಿಸಿ,ಎಸ್ಪಿ ಕಚೇರಿ ಮುಂದೆ ಡಿಎಸ್ಎಸ್ ಕ್ರಾಂತಿಕಾರಿ ಬಣ ಪ್ರತಿಭಟನೆ
Yadgir, Yadgir | Sep 29, 2025 ಯಾದಗಿರಿ ಜಲಿಯ ವಡಿಗೇರ ತಾಲೂಕಿನ ಗೋನಾಲ ಗ್ರಾಮದಲ್ಲಿ ದಲಿತ ಸಮುದಾಯದವರು ಉಪಯೋಗಿಸುತ್ತಿದ್ದ ಬಾವಿಯನ್ನು ಕೆಲವರು ಅದನ್ನು ಮುಚ್ಚಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಮಧ್ಯಾನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ಸಂಘದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಅಕ್ಟೋಬರ್ 16 ರಿಂದ ಅಮರಣಾಂತ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.