ಶಿವಮೊಗ್ಗ: ಜುಲೈ 13ರಂದು ಲೋಕ ಅದಾಲತ್: ನಗರದಲ್ಲಿ ನ್ಯಾಯಮೂರ್ತಿ ಮಂಜುನಾಥ್ ನಾಯಕ್
ರಾಜೀ ಆಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯಕ್ರಮ ಜುಲೈ 13ರ ಶನಿವಾರದಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಮನವಿ ಮಾಡಿದರು. ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವ ದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜು.13 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಲೋಕ ಅದಾಲತ್ ನಡೆಯಲಿದೆ ಎಂದರು