ಶಿವಮೊಗ್ಗ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಳ: ನಗರದಲ್ಲಿ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಆರೋಪ
ಶಿವಮೊಗ್ಗ ಮಹಾನಗರ ಪಾಲಿಕೆ ನಿದ್ರಿಸುತ್ತಿದೆ ಜನರ ಹಿತ ಮರೆತಿದೆ ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಹೇಳಿದ್ದಾರೆ ಬುಧವಾರ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು ಪಾಲಿಕೆ ಈಗ ಅಧಿಕಾರಿಗಳ ಕೈಯಲ್ಲಿದೆ ಆದರೆ ಈ ಅಧಿಕಾರಿಗಳು ನಗರದ ಅಭಿವೃದ್ಧಿಯನ್ನು ಮರೆತಿದ್ದಾರೆ, ಇಡೀ ನಗರದಲ್ಲಿ ಸ್ವಚ್ಛತೆ ಇಲ್ಲದೆ ಕಸದ ರಾಶಿ ಎಲ್ಲೆಡೆ ಕಂಡು ಬರುತ್ತಿದೆ. ಅವ್ಯವಸ್ಥೆಯ ಆಗರವಾಗಿದೆ ಸೊಳ್ಳೆಗಳ ನಿಯಂತ್ರಣ ಇಲ್ಲವೇ ಇಲ್ಲ. ಇದರ ಪರಿಣಾಮವಾಗಿ ನಗರದಲ್ಲೇಡೆ ಡೆಂಗ್ಯೂ ಜ್ವರ ಸೇರಿದಂತೆ ಸಾಂಕ್ರಮಿಕ ರೋಗಗಳ ತಾಣವಾಗಿದೆ ಎಂದು ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು.