ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬೈಚಾಪುರ - ಬೆಟ್ಟಕೋಟೆ ಮದ್ಯೆ ಬಳಿ ಶನಿವಾರ ನಡೆದಿದೆ. ಅಪಘಾತದ ರಭಸಕ್ಕೆ ಛಿದ್ರ ಛಿದ್ರವಾಗಿ ದೇಹಗಳು ಬಿದ್ದಿವೆ. ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಮೂರು ಜನ ವಿದ್ಯಾರ್ಥಿಗಳು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿಗೆ ಬರ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಇನ್ನೂ ಈ ಮೂರು ಜನ ವಿದ್ಯಾರ್ಥಿಗಳು ಹುಣಸಮಾರೇನಹಳ್ಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.