ಪೊಲೀಸರ ಭರ್ಜರಿ ಕಾರ್ಯಾಚರಣೆ: 33 ದ್ವಿಚಕ್ರ ವಾಹನ, ₹13 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಮೈಸೂರು: ನಗರದ ದೇವರಾಜ ಉಪವಿಭಾಗದ ದೇವರಾಜ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ₹15 ಲಕ್ಷ ಮೌಲ್ಯದ 33 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಂದೆಡೆ, ಲಷ್ಕರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಅಂತರರಾಜ್ಯ ಮಹಿಳಾ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹13 ಲಕ್ಷ ಮೌಲ್ಯದ 107 ಗ್ರಾಂ ಚಿನ್ನದ ಸರಗಳನ್ನು ಜಪ್ತಿ ಮಾಡಿದ್ದಾರೆ.
ಡಿಸಿಪಿ ಸುಂದರರಾಜ್ ಕೆ.ಎಸ್. ಅವರ ಮಾರ್ಗದರ್ಶನ ಹಾಗೂ ಎಸಿಪಿ ಕೆ. ರಾಜೇಂದ್ರ ಅವರ ನೇತೃತ್ವದಲ್ಲಿ ಎರಡೂ ಕಾರ್ಯಾಚರಣೆಗಳು ನಡೆದಿವೆ. ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಐಪಿಎಸ್ ಅವರು ಪ್ರಶಂಸಿಸಿದ್ದಾರೆ.
ಪೊಲೀಸರ ನಿರಂತರ ಕಾರ್ಯಾಚರಣೆಯಿಂದ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಮಹತ್ವದ ಯಶಸ್ಸು ಸಾಧಿಸಲಾಗಿದೆ. @topfans Yadgir News
Yadgir, Yadgir | Aug 18, 2026