ಸೋಮವಾರ ಸಂಜೆ 4.30ರ ಸುಮಾರು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು ಅರ್ಗಾದ ಐಎನ್ಎಸ್ ಕದಂಬ ನೌಕಾನೆಲೆಯಂತಹ ಅತಿ ಸೂಕ್ಷ್ಮ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರ ಕುರಿತು ಜನಶಕ್ತಿ ವೇದಿಕೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಸ್ಪಷ್ಟನೆ ಕೋರಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದೆ.