ಬಳ್ಳಾರಿ: ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
ಸಡಗರ -ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ: ನಗರದಲ್ಲಿ ಎಡಿಸಿ ಮಹಮ್ಮದ್ ಝುಬೇರ್
ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿAದ ಆಚರಿಸಲು ನಿರ್ಧರಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮದ್ಯಾಹ್ನ 3ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ(ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪೌರಾಡಳಿತ, ಹಜ್ ಸಚಿವರಾದ ರಹೀಂ ಖಾನ್ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು. ವೇದಿಕೆ ಸಿದ್ದತೆ, ಆಹ್ವಾನ ಪತ್ರಿಕೆ ಮು