ಬಳ್ಳಾರಿ: ಸುದಾಕ್ರಾಸ್ ಬಳಿಯ ಮನೆಯೊಂದರಲ್ಲಿ ಗಂಧದ ಮರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ
ಬಳ್ಳಾರಿ ಜಿಲ್ಲೆಯ ಹೊರವಲಯದ ಸುದಾಕ್ರಾಸ್ ಬಳಿ ಇರುವ ಮನೆಯಲ್ಲಿ ಸೋಮವಾರ ರಾತ್ರಿ ಗಂಧದ ಮರ ಕಳವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಕಳ್ಳತನ ನಡೆದಿದ್ದು, ಸಿಸಿ ಟಿವಿ ದೃಶ್ಯದಲ್ಲಿ ಸೆರೆ ಸಿಕ್ಕಿದೆ.ಈ ದೃಶ್ಯವು ಸೆಪ್ಟೆಂಬರ್ 16, ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಸಂಬಂಧಿಸಿದ ಮನೆಯ ಮಾಲೀಕರು ಕೌಲ್ ಬಜಾರ್ ಠಾಣೆಗೆ ದೂರು ನೀಡಿದ್ದಾರೆ.ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಬಳ್ಳಾರಿ ನಗರದಲ್ಲಿ ರಾತ್ರಿ ವೇಳೆ ಬೆಲೆಬಾಳುವ ಗಂಧದ ಮರಗಳ ಕಳ್ಳತನಗಳು ಹೆಚ್ಚಾಗಿದ್ದು, ಹಲವಾರು ಯುವಕರು ವಿವಿಧ ಪ್ರದೇಶಗಳಲ್ಲಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ