ಬಂಗಾರಪೇಟೆ: ಅನಿಗಾನಹಳ್ಳಿ ಬಳಿ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು
ಅನಿಗಾನಹಳ್ಳಿ ಬಳಿ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಬಳಿ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತ ದುರ್ದೈವಿ ಮನೋಹರ್ ೨೭ ವರ್ಷ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿಯ ಗ್ರಾಮದವರೆಂದು ತಿಳಿದು ಬಂದಿದೆ. ಅನಿಗಾನಹಳ್ಳಿ ಬಳಿ ಇಂದು ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಸ್ಥಿತಿ ಗಂಭೀರವಾಗಿದ್ದು ಓರ್ವ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.