ಭಾಲ್ಕಿ: ಪಟ್ಟಣದಲ್ಲಿ 16.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸರ್ಕಾರಿ ಆಸ್ಪತ್ರೆ ನೂತನ ಕಟ್ಟಡ ಸಚಿವ ಈಶ್ವರ ಖಂಡ್ರೆ ಪರಿಶೀಲನೆ
Bhalki, Bidar | Oct 19, 2025 ಭಾಲ್ಕಿ ಕ್ಷೇತ್ರದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದೃಢ ನಿಶ್ಚಯದಿಂದ ₹16.50 ಕೋಟಿ ವೆಚ್ಚದಲ್ಲಿ 150 ಹಾಸಿಗೆಯ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆ ನಿರ್ಮಾಣ ಕಾರ್ಯ ಭಾಲ್ಕಿ ಪಟ್ಟಣದಲ್ಲಿ ವೇಗವಾಗಿ ಮುಂದುವರಿಯುತ್ತಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ, ಆಸ್ಪತ್ರೆಯ ನಿರ್ಮಾಣದಲ್ಲಿ ಗುಣಮಟ್ಟ, ಸೌಕರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಪ್ರಥಮ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆನು. ಈ ಹೊಸ ಆಸ್ಪತ್ರೆ ಪೂರ್ಣಗೊಂಡ ಬಳಿಕ ಭಾಲ್ಕಿ ಹಾಗೂ ಸುತ್ತಮುತ್ತಲಿನ ಸಾವಿರಾರು ಜನತೆಗೆ ಸಮರ್ಪಕ ವೈದ್ಯಕೀಯ ಸೇವೆ ಲಭ್ಯವಾಗಲಿದೆ.