ಶಿವಮೊಗ್ಗ: ನಗರದ ನ್ಯೂಮಂಡ್ಲಿಯಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ
ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಲ್ ನಲ್ಲಿ ಶನಿವಾರ ಗೊಂದಲ ಸೃಷ್ಟಿಯಾಗಿತ್ತು. ಇದಕ್ಕೆ ಕಾರಣ ನ್ಯೂಮಂಡ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಹಾಕಲಾಗಿದ್ದ ಕಟೌಟ್. ಕಟೌಟ್ ನಲ್ಲಿ ಹಿಂದೂ ರಾಷ್ಟ್ರ ಎಂಬ ಪದ ಬಳಕೆಗೆ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಎಸ್ಪಿ ಮಿಥುನ್ ಕುಮಾರ್ ಮುಸ್ಲಿಂ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜೆ ನ್ಯೂ ಮಾಡ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸಂಭ್ರಮ ಸಡಗರದಿಂದ ನಡೆಯುತ್ತಿದ್ದು, ಡಿಜೆ ಸದ್ದಿಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸುತ್ತಿದ್ದಾರೆ.