ಶಿವಮೊಗ್ಗ: ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸನಗರ ತಹಶೀಲ್ದಾರ್‌ಗೆ ಮನವಿ
ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಆಗ್ರಹಿಸಿ ಹೊಸನಗರ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ರಶ್ಮಿ ಅವರಿಗೆ ಶನಿವಾರ ಮನವಿಯನ್ನು ಸಲ್ಲಿಸಿದರು. ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಯುಪಿಎಸ್ ಜಾರಿಗೊಳಿಸುವ ಭರವಸೆಯನ್ನು ನೀಡಿದ್ದು, ಈ ಭರವಸೆಯಂತೆ ಶೀಘ್ರದಲ್ಲೇ ಹಳೆ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು. ಓಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರಿಗೆ ನೀಡಿರುವಂತೆ ಎಂಪಿಎಸ್ಸನ್ನ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಮನವಿಯನ್ನ ಸಲ್ಲಿಸಿದ್ದಾರೆ.