ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ’ ಅಂಗವಾಗಿ ದತ್ತು ಕೇಂದ್ರದಲ್ಲಿ ಜನ್ಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಆಯೋಜಿಸಲಾದ ‘ಅಂತರಾಷ್ಟ್ರೀಯ ದತ್ತು ಮಾಸಾಚರಣೆ’ ಅಂಗವಾಗಿ ದತ್ತು ಕೇಂದ್ರದಲ್ಲಿ ಜನ್ಮೋತ್ಸವ ಹಮ್ಮಿಕೊಳ್ಳಲಾಗಿತ್ತು